ಬೆಂಗಳೂರು: ದೆಹಲಿಯ ಕೆಂಪು ಕೋಟೆ ಬಳಿ ನಡೆದ ಕಾರ್ ಸ್ಫೋಟದ ಹಿನ್ನೆಲೆಯಲ್ಲಿ(Delhi Bomb Blast) ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ(Bengaluru) ಬಿಗಿ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ನಗರದಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದ್ದು ಯಾವುದೇ ಅಹಿತಕರ ಘಟನೆ ನಡೆಯದಂತೆ ನಗರ ಪೊಲೀಸ್ ಆಯುಕ್ತರ ಸೂಚನೆ. ಮೇರೆಗೆ ಕಟ್ಟೆಚ್ಚರ ವಹಿಸಲಾಗಿದೆ.
ಕೆಂಪೇಗೌಡ ವಿಮಾನ ನಿಲ್ದಾಣ ಮತ್ತು ಮೆಸೇಜ್ ಮೆಟ್ರೋ ಸೇರಿದಂತೆ ಪ್ರಮುಖ ಕೇಂದ್ರಗಳಲ್ಲಿ ಬಿಗಿ ಭದ್ರತೆ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ(Kempegowda International Airport) ಭದ್ರತೆಯನ್ನು ಹೆಚ್ಚಿಸಲಾಗಿದ್ದು ವಿಮಾನ ನಿಲ್ದಾಣಕ್ಕೆ ಬರುವ ಮತ್ತು ಹೋಗುವ ಎಲ್ಲಾ ವಾಹನಗಳ ಮೇಲೆ ತೀವು ನಿಗಾ ಇಡಲಾಗಿದೆ. ಏರ್ಫೋರ್ಟ್ ಒಳ ಮತ್ತು ಹೊರ ಆವರಣದಲ್ಲಿ ಹೆಚ್ಚುವರಿ ಶಸ್ತ್ರಸಜ್ಜಿತ ಸಿಐಎಸ್ಎಫ್ (CISF) ಸಿಬ್ಬಂದಿ ನಿಯೋಜನೆ ಜೊತೆಗೆ ಗಸ್ತು ಹೆಚ್ಚಿಸಲಾಗಿದೆ. ಇದೇ ರೀತಿ ಜನನಿಬಿಡ ಸ್ಥಳಗಳಾದ ಮೆಜೆಸ್ಟಿಕ್ ಬಸ್ ನಿಲ್ಯಾಣ(Mejestic Bus stan), ರೈಲ್ವೆ ನಿಲ್ದಾಣ) Railway station) ಹಾಗೂ ಮೆಟ್ರೋ ನಿಲ್ದಾಣಗಳ(Metro station) ಬಳಿ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ರೈಲ್ವೆ ನಿಲ್ದಾಣಗಳಲ್ಲಿ ಪ್ರಯಾಣಿಕರ ತಪಾಸಣೆ ಮತ್ತು ಶಾನದಳದಿಂದ ಪರಿಶೀಲನೆ ನಡೆಸಲಾಗುತ್ತಿದೆ ಮೆಜೆಸ್ಟಿಕ್(Mejestic) ಸುತ್ತಮುತ್ತ ಕೆಎಸ್ಆರ್ಪಿ(KSRP) ತುಕಡಿ ನಿಯೋಜಿಸಿ ಹೆಚ್ಚುವರಿ ಪೊಲೀಸರನ್ನು ನೇಮಿಸಲಾಗಿದೆ.
ಸಿಎಂ ಸಿದ್ದರಾಮಯ್ಯರಿಂದ ಸಂತಾಪ
ದೆಹಲಿಯ ಸ್ಫೋಟದ ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ(Cm Siddaramaiah) ತಮ್ಮ ‘ಎಕ್ಸ್’ ಖಾತೆಯಲ್ಲಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಈ ಘಟನೆಯಿಂದ ಮೃತಪಟ್ಟವರ ಬಗ್ಗೆ ನೋವು ಮತ್ತು ದಿಗ್ಧಮೆ ಉಂಟಾಗಿದೆ ಎಂದಿರುವ ಸಿಎಂ, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ದೆಹಲಿ ಸ್ಫೋಟ ಪ್ರಕರಣವನ್ನು ರಾಜ್ಯ ಸರ್ಕಾರವು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸುವಂತೆ ಅವರು ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ. ಗೃಹ ಇಲಾಖೆಗೂ ಜನನಿಬಿಡ ಸ್ಥಳಗಳಲ್ಲಿ ಭದ್ರತೆ ಹೆಚ್ಚಿಸಿ, ಜನರ ಸುರಕ್ಷತೆಗೆ ಆದ್ಯತೆ ನೀಡುವಂತೆ ಸೂಚಿಸಲಾಗಿದ್ದು, ಸಾರ್ವಜನಿಕರು ಸಹ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕೆಂದು ಅವರು ಮನವಿ, ಮಾಡಿದ್ದಾರೆ.
