ಬೆಂಗಳೂರು: ಗ್ರೇಟರ್ ಬೆಂಗಳೂರಿನಲ್ಲಿ(Greater Bengaluru) ಇದೀಗ ವಾರಾಂತ್ಯದವರೆಗೆ ಭಾರೀ(Heavy Rain) ಮಳೆ ಹಾಗೂ ಗುಡುಗು ಸಹಿತ ಮೋಡ ಕವಿದ ವಾತಾವರಣ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ(Karnataka weather Report).
ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾನುವಾರದವರೆಗೆ ಪ್ರತಿದಿನ ಹಗುರ, ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ ಎಂದು ಐಎಂಡಿ(IMD) ಮುನ್ಸೂಚನೆ ನೀಡಿದೆ. ಈ ಅವಧಿಯಲ್ಲಿ ಗಾಳಿಯ ವೇಗವು ಗಂಟೆಗೆ 40-50 ಕಿಲೋಮೀಟರ್ಗಳಷ್ಟು ಇರಲಿದೆ ಎಂದು ತಿಳಿಸಲಾಗಿದೆ.
ಇದನ್ನೂ ಓದಿ: Inspirational Teacher: “ಜ್ಞಾನ ದೀಪದ ಜೊತೆಯಲ್ಲಿ ನಡೆದ ಹಾದಿ”
ಇತರೆ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ
ಬೆಂಗಳೂರು ಗ್ರಾಮಾಂತರ(Bengaluru Rural), ಬೆಂಗಳೂರು ನಗರ(Bengaluru City), ಬಳ್ಳಾರಿ, ಚಾಮರಾಜನಗರ ಮತ್ತು ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಗುರ ಹಾಗೂ ಮಧ್ಯಮ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಳೆಗೆ ಕಾರಣ
ಒಡಿಶಾ ಕರಾವಳಿಯ ಆಚೆ, ವಾಯುವ್ಯ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಕಡಿಮೆ ಒತ್ತಡದ ವ್ಯವಸ್ಥೆಯೇ ಈ ಮಳೆಗೆ ಕಾರಣ ಎಂದು ಐಎಂಡಿ ವಿವರಿಸಿದೆ. ಸಮುದ್ರ ಮಟ್ಟದಿಂದ 7.6ಕಿ.ಮೀ.ವರೆಗೆ ವಿಸ್ತರಿಸಿರುವ ಚಂಡಮಾರುತದ ಮುಂದುವರೆಯುತ್ತಿದ್ದು, ಜಾರ್ಖಂಡ್ ಮತ್ತು ಛತ್ತೀಸ್ಗಢದ ಕಡೆಗೆ ಒಳನಾಡಿನತ್ತ ಚಲಿಸುತ್ತಿದೆ, ಇದರ ಪರಿಣಾಮ ಕರ್ನಾಟಕದಾದ್ಯಂತ ಮಳೆಯಾಗುತ್ತಿದೆ.(Karnataka weather Report)
ಇತ್ತೀಚಿನ ತಾಪಮಾನ ಮತ್ತು ಮಳೆ ವಿವರ
ಕಳೆದ 24 ಗಂಟೆಗಳಲ್ಲಿ ನಗರದಲ್ಲಿ ಗರಿಷ್ಠ, ತಾಪಮಾನ 26.7 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಈ ಅವಧಿಯಲ್ಲಿ ಬೆಂಗಳೂರು ಗ್ರಾಮಾಂತರದಲ್ಲಿ 2.8 ಮಿ.ಮೀ. ಮಳೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಎರಡೂ ಪದೇಶಗಳಲ್ಲಿ ತುಂತುರು ಮತ್ತು ಹಗುರ ಮಳೆಯಾಗಿರುವುದು ವರದಿಯಾಗಿದೆ.
