shira: ದ್ವಿತೀಯ ಪಿಯುಸಿ ಫಲಿತಾಂಶ ಹೊರಬಿದ್ದಿದ್ದು, ತಾವರೆಕೆರೆ ಗ್ರಾಮದಲ್ಲಿರುವ ಶ್ರೀ ಸಿದ್ಧಾರ್ಥ ಪದವಿ ಪೂರ್ವ ಕಾಲೇಜು 95.62% ಶೇಕಡ ಫಲಿತಾಂಶವನ್ನು ಪಡೆದಿದೆ.
ಈ ಕಾಲೇಜಿನಲ್ಲಿ ಬಹುತೇಕ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿದ್ದರೂ ಸಹ 29 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದು, 71 ಮಂದಿ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಕಾವ್ಯ ಎಂಬ ವಿದ್ಯಾರ್ಥಿನಿ 588 ಅಂಕಗಳನ್ನು ಗಳಿಸಿ ವಾಣಿಜ್ಯ ವಿಭಾಗದಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದು, ಹಾಗೆಯೇ 579 ಅಂಕಗಳನ್ನು ತರುಣ್ ಎಂಬ ವಿದ್ಯಾರ್ಥಿಗಳಿಸಿ ಕಲಾವಿಭಾಗದಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.(shira)
ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಕಾಲೇಜಿನ ಪ್ರಾಂಶುಪಾಲರಾದ ಗೋಪಾಲ್ ಸೇರಿದಂತೆ ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿಗಳು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
