SSLC Exam: 2025-26ನೇ ಸಾಲಿನಲ್ಲಿ ನಡೆಯುವ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕವನ್ನು ಪರಿಷ್ಕರಣೆ ಮಾಡಿ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಆದೇಶಿಸಿದೆ.
ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಲಿಯಿಂದ ನಡೆಸಲಾಗುವ ಎಸ್.ಎಸ್.ಎಲ್.ಸಿ ಪರೀಕ್ಷೆಗೆ (SSLC Exam) ಸಂಬಂಧಪಟ್ಟಂತೆ ನೋಂದಣಿಯಾಗುವ ವಿದ್ಯಾರ್ಥಿಗಳಿಂದ ಉಲ್ಲೇಖಿತ-1ರ ಸರ್ಕಾರದ ಆದೇಶದಲ್ಲಿ ಎಸ್.ಎಸ್.ಎಲ್.ಸಿ (SSLC)ಪರೀಕ್ಷಾ ಶುಲ್ಕವನ್ನು ಶೇಕಡಾ 5 ರಷ್ಟು ಪ್ರತಿ ವರ್ಷ ಹೆಚ್ಚಿಸಿ ಪರೀಷ್ಕರಿಸಲು ಆದೇಶ ಮಾಡಲಾಗಿದೆ.
ಎಸ್ ಎಸ್ ಎಲ್ ಸಿ ಪರೀಕ್ಷಾ ಶುಲ್ಕದ ಹೆಚ್ಚಳ ವಿವರ
ಎಸ್ ಎಸ್ ಎಲ್ ಸಿ ಪರೀಕ್ಷಾ ಶುಲ್ಕ ( CCERF & CCEPF) ವಿದ್ಯಾರ್ಥಿಗಳು- ರೂ.676 ರಿಂದ ಶುಲ್ಕವನ್ನು ರೂ.710ಕ್ಕೆ ಏರಿಕೆ ಮಾಡಲಾಗಿದೆ.
ಹೊಸದಾಗಿ ನೋಂದಣಿಯಾಗುವ ಖಾಸಗಿ ಅಭ್ಯರ್ಥಿಗಳ ನೋಂದಣಿ ಶುಲ್ಕ ಹಾಗೂ ಅರ್ಜಿ ಶುಲ್ಕವನ್ನು ರೂ.236ರಿಂದ ರೂ.248ಕ್ಕೆ ಹೆಚ್ಚಳ ಮಾಡಲಾಗಿದೆ.
ಈಗಾಗಲೇ ಖಾಸಗಿ ಅಭ್ಯರ್ಥಿಯಾಗಿ ನೋಂದಣಿಯಾಗಿ ಪರೀಕ್ಷಾ ಶುಲ್ಕ ಪಾವತಿಸಿದ ಅಭ್ಯರ್ಥಿಗಳ ನೋಂದಣಿ ನವೀಕರಣ ಶುಲ್ಕವನ್ನು ರೂ.69 ರಿಂದ ರೂ.72ಕ್ಕೆ ಹೆಚ್ಚಿಸಲಾಗಿದೆ.
ಇನ್ನೂ ಪುನರಾವರ್ತಿ ಶಾಲಾ, ಖಾಸಗಿ ಅಭ್ಯರ್ಥಿಗಳ ಪರೀಕ್ಷಾ ಶುಲ್ಕ ಒಂದು ವಿಷಯಕ್ಕೆ ರೂ.427 ರಿಂದ ರೂ.448ಕ್ಕೆ ಏರಿಕೆ ಮಾಡಲಾಗಿದೆ.
ಎರಡು ವಿಷಯಕ್ಕೆ ರೂ.532 ರಿಂದ ರೂ.559ಕ್ಕೆ ಹೆಚ್ಚಳ ಮಾಡಲಾಗಿದೆ.
ಮೂರು ಮತ್ತು ಮೂರಕ್ಕಿಂತ ಹೆಚ್ಚಿನ ವಿಷಯಗಳಿಗೆ ರೂ.716 ರಿಂದ ಶುಲ್ಕವನ್ನು ರೂ.752ಕ್ಕೆ ಹೆಚ್ಚಿಸಲಾಗಿದೆ.
ಈ ಮೇಲ್ಕಂಡಂತೆ ದರಗಳನ್ನು 2025-26ನೇ ಸಾಲಿನಲ್ಲಿ ನಡೆಯಲಿರುವ ಪರೀಕ್ಷೆಗಳಿಗೆ ಅನ್ವಯವಾಗುವಂತೆ ದರ ಪರಿಷ್ಕರಿಸಿರುವುದಾಗಿ ಆದೇಶದಲ್ಲಿ ಕರ್ನಾಟಕ (karnataka)ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ತಿಳಿಸಿದ್ದಾರೆ.
