ಬೆಂಗಳೂರು: ಟೀನೇಜ್ ಪ್ರೆಗ್ನೆನ್ಸಿ(Teenage Pregnency) ಪ್ರಮಾಣ ಕರ್ನಾಟಕದಲ್ಲಿ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿರುವುದು ಕಳವಳ ಮೂಡಿಸಿದೆ. ತಾಯ್ತನದ ವಯಸ್ಸಿಗೂ ಮೊದಲೇ ಗರ್ಭಿಣಿಯರಾಗುತ್ತಿರುವ ಪ್ರಕರಣಗಳು ಹೆಚ್ಚಾಗಿದ್ದು, ಇದು ವೈಯಕ್ತಿಕ, ಕೌಟುಂಬಿಕ ಮತ್ತು ಸಾಮಾಜಿಕ ಸಮಸ್ಯೆಗಳಿಗೆ ಕಾರಣವಾಗುತ್ತಿದೆ. ಈ ಆತಂಕಕಾರಿ ಬೆಳವಣಿಗೆಯ ಹಿಂದೆ ಯಾವ ಕಾರಣಗಳಿವೆ? ಮತ್ತು ಈ ಸಮಸ್ಯೆಗೆ ಕಾರಣಗಳೇನು ಎಂಬುದನ್ನು ಅಂಕಿ ಅಂಶ ಸಮೇತ ಈ ವರದಿಯಲ್ಲಿ ನೀಡಲಾಗಿದೆ.
ಇದನ್ನೂ ಓದಿ: India America Trade: ಅಮೇರಿಕಾದ ಸುಂಕದ ಬಿಸಿಗೂ ಮಣಿಯಾದ ಭಾರತ: ಎಲ್ಲಿ ಲಾಭವೂ ಅಲ್ಲೇ ವ್ಯವಹಾರ
ಬೆಚ್ಚಿಬೀಳಿಸುವ ಆರೋಗ್ಯ ಇಲಾಖೆಯ ಅಂಕಿ-ಅಂಶಗಳು
ಆರೋಗ್ಯ ಇಲಾಖೆ ನೀಡಿರುವ ಅಂಕಿ-ಅಂಶಗಳು ನಿಜಕ್ಕೂ ಆಘಾತಕಾರಿ. ಕಳೆದ ಆರು ತಿಂಗಳಲ್ಲಿ ರಾಜ್ಯದಲ್ಲಿ 22,000ಕ್ಕೂ ಹೆಚ್ಚು ಟೀನೇಜ್ ಪ್ರೆಗ್ನೆನ್ಸಿ(Teenage Pregnency) ಪ್ರಕರಣಗಳು ವರದಿಯಾಗಿವೆ. ಇದರಲ್ಲಿ ಬೆಂಗಳೂರು ಅರ್ಬನ್ನಲ್ಲಿಯೇ 8,891 ಪ್ರಕರಣಗಳು ದಾಖಲಾಗಿವೆ. ಕಳೆದ ಮೂರು ವರ್ಷಗಳ ಒಟ್ಟಾರೆ ಅಂಕಿ-ಅಂಶಗಳನ್ನು ನೋಡಿದರೆ, ರಾಜ್ಯಾದ್ಯಂತ 3,36,000ಕ್ಕೂ ಹೆಚ್ಚು ಪ್ರಕರಣಗಳು ಕಂಡುಬಂದಿವೆ. ಈ ಸಂಖ್ಯೆಗಳು ಸಮಾಜದಲ್ಲಿನ ದೊಡ್ಡ ಸಮಸ್ಯೆಯನ್ನು ಎತ್ತಿ ತೋರಿಸುತ್ತಿವೆ.
ಟೀನೇಜ್ ಪ್ರೆಗ್ನೆನ್ಸಿಗೆ ಕಾರಣಗಳೇನು?
ಈ ಸಮಸ್ಯೆಗೆ ಕೇವಲ ಒಂದು ಕಾರಣವಿಲ್ಲ. ಇದು ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮಸ್ಯೆಗಳ ಸಂಕೀರ್ಣ ಜಾಲವಾಗಿದೆ.
ಬಾಲ್ಯ ವಿವಾಹ: ಶಿಕ್ಷಣದ ಕೊರತೆ ಮತ್ತು ಮೂಢನಂಬಿಕೆಗಳಿಂದಾಗಿ ಕೆಲವು ಪೋಷಕರು ಹೆಣ್ಣುಮಕ್ಕಳಿಗೆ ಬೇಗನೆ ಮದುವೆ ಮಾಡಿಕೊಡುತ್ತಾರೆ. ಇದು ಬಾಲ ಗರ್ಭಿಣಿಗಳ ಸಂಖ್ಯೆ ಹೆಚ್ಚಾಗಲು ಪ್ರಮುಖ ಕಾರಣವಾಗಿದೆ.
ಇದನ್ನೂ ಓದಿ: ಕ್ರಿಕೆಟ್ ವೃತ್ತಿ ಜೀವನಕ್ಕೆ ನಿವೃತ್ತಿ ಘೋಷಿಸಿದ ಟೆಸ್ಟ್ ಸ್ಪೆಷಲಿಸ್ಟ್ Cheteshwar Pujara
ಅರಿವಿನ ಕೊರತೆ: ಯುವ ಜನರಲ್ಲಿ ಲೈಂಗಿಕ ಶಿಕ್ಷಣ ಮತ್ತು ಕುಟುಂಬ ಕಲ್ಯಾಣ ವಿಧಾನಗಳ ಬಗ್ಗೆ ಸರಿಯಾದ ಅರಿವಿಲ್ಲ. ಸೂಕ್ತ ರಕ್ಷಣೆ ವಿಧಾನಗಳ ಬಗ್ಗೆ ಜ್ಞಾನವಿಲ್ಲದಿರುವುದು ಈ ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸಿದೆ.
ಬಡತನ ಮತ್ತು ಸಾಮಾಜಿಕ ಅಭದ್ರತೆ: ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಲ್ಲಿ ಬಾಲ್ಯ ವಿವಾಹ ಹೆಚ್ಚಿನ ಮಟ್ಟಿಗೆ ಅಡೆಯುತ್ತಿದೆ. ಅಲ್ಲದೆ, ವಲಸೆ ಹೋಗುವ ಪ್ರವೃತ್ತಿ, ಸಾಮಾಜಿಕ ಅಭದ್ರತೆಗಳು ಯುವತಿಯರನ್ನು ಅಪಾಯಕ್ಕೆ ತಳ್ಳುತ್ತಿವೆ.
ಕೌಟುಂಬಿಕ ಒತ್ತಡ ಮತ್ತು ದೌರ್ಜನ್ಯ: ಕೆಲವು ಪ್ರಕರಣಗಳಲ್ಲಿ ಕೌಟುಂಬಿಕ ಒತ್ತಡ ಅಥವಾ ದೌರ್ಜನ್ಯದಿಂದಾಗಿ ಬಾಲಕಿಯರು ಗರ್ಭಿಣಿಯಾಗುತ್ತಿದ್ದಾರೆ.
ಆರೋಗ್ಯದ ಮೇಲೆ ಭಾರಿ ಪರಿಣಾಮ
ಬಾಲ ಗರ್ಭಿಣಿಯಾಗುವುದರಿಂದ(Teenage Pregnency) ತಾಯಿ ಮತ್ತು ಮಗುವಿನ ಆರೋಗ್ಯದ ಮೇಲೆ ಗಂಭೀರ ಪರಿಣಾಮಗಳು ಉಂಟಾಗುತ್ತವೆ. ದೇಹ ಸಂಪೂರ್ಣವಾಗಿ ಬೆಳೆಯದ ಕಾರಣ, ಬಾಲ ಬಾಣಂತಿಯರಲ್ಲಿ ರಕ್ತಹೀನತೆ, ಅಧಿಕ ರಕ್ತದೊತ್ತಡ, ಹೆರಿಗೆಯಲ್ಲಿ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಇದರಿಂದ ಶಿಶು ಜನನದ ಸಮಯದಲ್ಲಿ ಅಪಾಯ ಹೆಚ್ಚಾಗುತ್ತದೆ. ಅಲ್ಲದೆ, ಇದರಿಂದ ತಾಯಿ ಮತ್ತು ಮಗುವಿನ ಮಾನಸಿಕ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರಬಹುದು.
ಸರ್ಕಾರ ಮತ್ತು ಸಮಾಜದ ಹೊಣೆಗಾರಿಕೆ
ಈ ಸಮಸ್ಯೆಯನ್ನು ತಡೆಯಲು ಸರ್ಕಾರ ಈಗಾಗಲೇ ಕೆಲವು ಕ್ರಮಗಳನ್ನು ಕೈಗೊಂಡಿದೆ. ಮಕ್ಕಳ ಹಕ್ಕುಗಳ ಆಯೋಗವು ಸೂಕ್ತ ಕ್ರಮಕ್ಕೆ ಒತ್ತಾಯಿಸಿದೆ. ಇದರ ಜೊತೆಗೆ, ಆರೋಗ್ಯ ಮತ್ತು ಶಿಕ್ಷಣ ಇಲಾಖೆಗಳು ಸಂಯೋಜಿತವಾಗಿ ಕೆಲಸ ಮಾಡುವುದು ಅಗತ್ಯ ಶಾಲೆಗಳಲ್ಲಿ ಸಮಗ್ರ ಲೈಂಗಿಕ ಶಿಕ್ಷಣ(se*x education) ನೀಡುವ ಮೂಲಕ ಯುವಕ-ಯುವತಿಯರಲ್ಲಿ ಜಾಗೃತಿ ಮೂಡಿಸಬೇಕು. NGOಗಳು ಮತ್ತು ಸ್ವಯಂಸೇವಾ ಸಂಸ್ಥೆಗಳು ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಅರಿವು ಕಾರ್ಯಕ್ರಮಗಳನ್ನು ನಡೆಸಬೇಕು. ಈ ಸಾಮಾಜಿಕ ಸಮಸ್ಯೆಯನ್ನು ತಡೆಗಟ್ಟಲು ಸರ್ಕಾರ, ಸಮಾಜ ಮತ್ತು ಕುಟುಂಬಗಳು ಒಟ್ಟಾಗಿ ಕೆಲಸ ಮಾಡುವುದು ಇಂದಿನ ತುರ್ತು ಅಗತ್ಯವಾಗಿದೆ.
